ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡ 10 ಮೀಸಲಾತಿ ನೀಡುವ ಕುರಿತಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ನಿಯಮವನ್ನು ಸುಪ್ರೀಂ ಕೋರ್ಟ್ ಕೂಡಾ ಎತ್ತಿ ಹಿಡಿದಿದೆ. ಹೀಗಾಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಇದನ್ನು ಜಾರಿಗೊಳಿಸಲು ಮುಂದಾಗಿವೆ.
ಇದರ ಮಧ್ಯೆ ತಮಿಳುನಾಡು ಸರ್ಕಾರ, ತನ್ನ ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೀಸಲಾತಿ ನೀಡುವುದಕ್ಕೆ ಅಸಮ್ಮತಿ ಸೂಚಿಸಿದೆ. ಕೇಂದ್ರ ಸರ್ಕಾರ ನೀಡಿರುವ ಮೀಸಲಾತಿ, ಬಡವರಲ್ಲಿ ಜಾತಿ ತಾರತಮ್ಯಕ್ಕೆ ಕಾರಣವಾಗುತ್ತದೆ ಎಂದು ಪ್ರತಿಪಾದಿಸಲಾಗಿದೆ.
ಶನಿವಾರದಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಮೀಸಲಾತಿ ನೀಡುವುದಕ್ಕೆ ಅಸಮ್ಮತಿ ಸೂಚಿಸಲಾಗಿದ್ದು, ಈ ಸಭೆಗೆ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಹಾಗೂ ಅದರ ಮಿತ್ರ ಪಕ್ಷ ಬಿಜೆಪಿ ಬಹಿಷ್ಕರಿಸಿದ್ದವು.