ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ತೀವ್ರ ಜಿದ್ದಾ ಜಿದ್ದಿನ ಕ್ಷೇತ್ರ ಕನಕಪುರದಲ್ಲಿ ಸಚಿವ ಆರ್.ಅಶೋಕ್ ಹಿನ್ನಡೆ ಸಾಧಿಸಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾರಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಹಿನ್ನಡೆಯಲ್ಲಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ 15098 ಮತಗಳ ಅಂತರದಿಂದ ಡಿ.ಕೆ.ಶಿವಕುಮಾರ್ ಮುನ್ನಡೆಯಲ್ಲಿದ್ದಾರೆ.