ಬೆಂಗಳೂರು: ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಯಾವ ಸಂಘ-ಸಂಸ್ಥೆಯನ್ನೂ ನಿಷೇಧಿಸುವ ಅಧಿಕಾರ ಇವರಿಗಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಆರ್.ಎಸ್.ಎಸ್. ನಿಷೇಧ ಮಾಡಲಿ ನೋಡೋಣ, ನಾನು ಸವಾಲು ಹಾಕುತ್ತೇನೆ ಎಂದರು.
ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಮೊದಲು ಆರ್.ಎಸ್.ಎಸ್. ಬಜರಂಗದಳ ನಿಷೇಧದ ಬಗ್ಗೆ ಸಿಎಂ ತಮ್ಮ ನಿಲುವು ಸ್ಪಷ್ಟಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಎಂದು ಜನರಿಗೆ ತಿಳಿಸಲಿ. ಆರ್.ಎಸ್.ಎಸ್ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.