ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಇಂದು ಸಂಜೆ ಗಡಿ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ಬೆಳಗಾವಿಯಲ್ಲಿ ಆರ್ ಎಸ್ ಎಸ್ ನಾಯಕರೊಂದಿಗಿನ ಅಮಿತ್ ಶಾ ಸಭೆ ದಿಢೀರ್ ರದ್ದಾಗಿದೆ ಎಂದು ತಿಳಿದುಬಂದಿದೆ.
ಇಂದು ಸಂಜೆ 6 ಗಂಟೆಗೆ ಅಮಿತ್ ಶಾ, ಬೆಳಗಾವಿಯಲ್ಲಿ ಆರ್ ಎಸ್ ಎಸ್ ನಾಯಕರೊಂದಿಗೆ ಸಭೆ ನಡೆಸುವ ಬಗ್ಗೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಆರ್ ಎಸ್ ಎಸ್ ನಾಯಕರೊಂದಿಗಿನ ಸಭೆ ರದ್ದಾಗಿದ್ದು, ಎರಡು ಸಭೆಗಳು ಮಾತ್ರ ನಡೆಯಲಿದೆ.
ಸಂಜೆ ಬೆಳಗಾವಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಒಟ್ಟು ಮೂರು ಸಭೆ ನಿಗದಿಯಾಗಿತ್ತು. ಅದರಲ್ಲಿ ಆರ್ ಎಸ್ ಎಸ್ ನಾಯಕರೊಂದಿಗಿನ ಸಭೆಯೊಂದು ರದ್ದಾಗಿದೆ ಎಂದು ತಿಳಿದುಬಂದಿದೆ.