ಬೆಂಗಳೂರು: ಕಳೆದ ವರ್ಷ ಆಸಿಡ್ ದಾಳಿಗೆ ಒಳಗಾಗಿದ್ದ ಸಂತ್ರಸ್ತ ಯುವತಿಗೆ ಉದ್ಯೋಗದ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
2022ರ ಏಪ್ರಿಲ್ 28 ರಂದು ಬೆಂಗಳೂರಿನಲ್ಲಿ ನಡೆದಿದ್ದ ಆಸಿಡ್ ದಾಳಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆಸಿಡ್ ದಾಳಿಗೆ ಒಳಗಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆಯಾಗಿದ್ದು, ಇಂದು ತಂದೆ-ತಾಯಿಯ ಜತೆ ಸಿಎಂ ಜನತಾ ದರ್ಶನಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ. ಅಲ್ಲದೇ ತನಗೆ ಉದ್ಯೋಗ ನೀಡುವಂತೆ ಮನವಿ ಮಾಡಿದ್ದಾರೆ. ತಕ್ಷಣ ಸಂತ್ರಸ್ತೆ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ಸಂತ್ರಸ್ತೆ ಹಾಗೂ ಕುಟುಂಬದ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.