ಕೋಲಾರ: ಇಟಿಸಿಎಂ ಆಸ್ಪತ್ರೆ ಲೆಕ್ಕಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಸುಳ್ಳು ಕೇಸ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚ್ ಫಾದರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.
ಆಸ್ಪತ್ರೆ ಅಕೌಂಟೆಂಟ್ ಜಾನ್ಸನ್ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಫಾದರ್ ಪ್ರೇರೇಪಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ನಕಲಿ ವಿದ್ಯಾರ್ಥಿನಿಯರು ಆಸ್ಪತ್ರೆ ಲೆಕ್ಕಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪೊಲೀಸರು ವಿಚಾರಣೆ ನಡೆಸಿದಾಗ ಇದು ಸುಳ್ಳು ಕೇಸ್ ಸಾಬೀತಾಗಿದೆ. ಸುಳ್ಳು ಕೇಸ್ ದಾಖಲಿಸಿದ ಹಿನ್ನೆಲೆಯಲ್ಲಿ ಇಬ್ಬರು ನಕಲಿ ವಿದ್ಯಾರ್ಥಿನಿಯರು, ಹಾಸ್ಟೆಲ್ ವಾರ್ಡನ್, ಮೆಥೊಡಿಸ್ಟ್ ಚರ್ಚ್ ಫಾದರ್ ಶಾಂತಕುಮಾರ್ ಸೇರಿದಂತೆ ನಾಲ್ವರನ್ನು ಕೋಲಾರ ಮಹಿಳಾ ಪೊಲೀಸರು ಬಂಧಿಸಿದ್ದಾರೆ.