ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಆಟಗಾರರ ಪ್ರದರ್ಶನಕ್ಕೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಈ ಮಧ್ಯೆ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯಲ್ಲಿ ಭಾರತೀಯ ಒಲಂಪಿಕ್ಸ್ ಆಟಗಾರರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯ ಒಲಿಂಪಿಕ್ ತುಕಡಿಯನ್ನು ಕೆಂಪು ಕೋಟೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಿದ್ದಾರೆ. ಆ ಸಮಯದಲ್ಲಿ ಪ್ರಧಾನಿಯವರು ಆಟಗಾರರನ್ನು ವೈಯಕ್ತಿಕವಾಗಿ ಭೇಟಿಯಾಗಿ ಸಂವಾದ ನಡೆಸಲಿದ್ದಾರೆ. 119 ಆಟಗಾರರನ್ನು ಒಳಗೊಂಡ ಭಾರತದ 228 ಸದಸ್ಯರ ತಂಡ ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡಿದೆ.
ಭಾರತ, ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ 2020ರಲ್ಲಿ ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದಿದೆ.