alex Certify BIG NEWS: ಆ.15ರ ವಿಶೇಷ ಅತಿಥಿಗಳಾಗಲಿದ್ದಾರೆ ಭಾರತೀಯ ಒಲಂಪಿಕ್ಸ್ ಆಟಗಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆ.15ರ ವಿಶೇಷ ಅತಿಥಿಗಳಾಗಲಿದ್ದಾರೆ ಭಾರತೀಯ ಒಲಂಪಿಕ್ಸ್ ಆಟಗಾರರು

ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಆಟಗಾರರ ಪ್ರದರ್ಶನಕ್ಕೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಈ ಮಧ್ಯೆ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯಲ್ಲಿ ಭಾರತೀಯ ಒಲಂಪಿಕ್ಸ್ ಆಟಗಾರರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯ ಒಲಿಂಪಿಕ್ ತುಕಡಿಯನ್ನು ಕೆಂಪು ಕೋಟೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಿದ್ದಾರೆ. ಆ ಸಮಯದಲ್ಲಿ ಪ್ರಧಾನಿಯವರು ಆಟಗಾರರನ್ನು ವೈಯಕ್ತಿಕವಾಗಿ ಭೇಟಿಯಾಗಿ ಸಂವಾದ ನಡೆಸಲಿದ್ದಾರೆ. 119 ಆಟಗಾರರನ್ನು ಒಳಗೊಂಡ ಭಾರತದ 228 ಸದಸ್ಯರ ತಂಡ ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡಿದೆ.

ಭಾರತ, ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ 2020ರಲ್ಲಿ ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...