ಬೆಂಗಳೂರು: ಯಾರು ಏನು ಬೇಕಾದರೂ ತಿನ್ನಬಹುದು. ಯಾವ ಅಭ್ಯಂತರವೂ ಇಲ್ಲ. ಆದರೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಎನ್ನುತ್ತಾರಲ್ಲ. ಇಂತಹ ಭಂಡತನವನ್ನು ಯಾರೂ ಒಪ್ಪಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ನಡೆಯನ್ನು ಖಂಡಿಸಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಸಂಸ್ಕೃತಿ ಪರಂಪರೆ, ಧಾರ್ಮಿಕ ಶ್ರದ್ಧೆ ಎಂಬುದು ಇದೆ. ದೇವರನ್ನು ನಂಬಿ ಜೀವನ ನಡೆಸುವ ಅಪಾರ ಜನಸಂಖ್ಯೆಯಿದೆ. ಉನ್ನತ ಸ್ಥಾನದಲ್ಲಿರುವವರು, ರಾಜಕಾರಣಿಗಳು ದೈವಿ ನಂಬಿಕೆಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದು ಚರ್ಚೆ ನಡೆಸುವುದು ಸರಿಯಲ್ಲ. ಇದು ಬೇಸರದ ಸಂಗತಿ ಎಂದರು.
ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಎಂಬುದು ಭಂಡತನ. ಇದನ್ನು ಒಪ್ಪಲು ಸಾಧ್ಯವಿಲ್ಲ. ರಾಜಕಾರಣಿಗಳ ಹೇಳಿಕೆ ಬೇರೆಯವರ ಮನಸ್ಸಿಗೆ ಘಾಸಿಯಾಗಬಾರದು ಎಂದು ಹೇಳಿದರು.