alex Certify BIG NEWS: ಇಂತಹ 20 ಆಡಿಯೋ ಇದೆ; ಬ್ಲೂ ಫಿಲ್ಮ್ ಕೂಡ ತೋರಿಸುತ್ತಿದ್ದ; ರಾಜಕೀಯವಾಗಿ ಡಿಕೆಶಿ ಮುಗಿಸುವುದಾಗಿ ರಮೇಶ್ ಜಾರಕಿಹೊಳಿ ಶಪಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂತಹ 20 ಆಡಿಯೋ ಇದೆ; ಬ್ಲೂ ಫಿಲ್ಮ್ ಕೂಡ ತೋರಿಸುತ್ತಿದ್ದ; ರಾಜಕೀಯವಾಗಿ ಡಿಕೆಶಿ ಮುಗಿಸುವುದಾಗಿ ರಮೇಶ್ ಜಾರಕಿಹೊಳಿ ಶಪಥ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಸಂಪತ್ತಿನ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆಡಿಯೊ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಸುದ್ದಿಗೋಷ್ಠಿ ನಡೆಸಿರುವ ರಮೇಶ್ ಜಾರಕಿಹೊಳಿ, ಡಿಕೆಶಿ ಬ್ಲ್ಯೂ ಫಿಲ್ಮ್ ತೋರಿಸುತ್ತಿದ್ದರೆಂದು ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ರಮೇಶ್ ಜಾರಕಿಹೊಳಿ, ಇಂತಹ 20 ಆಡಿಯೋಗಳು ನನ್ನ ಬಳಿ ಇವೆ. ನಾನು ಏನಾದರೂ ಮಾತನಾಡಿದರೆ ಅದನ್ನು ಮಾಡಿಯೇ ತೀರುತ್ತೇನೆ. ಡಿ.ಕೆ.   ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುತ್ತೇನೆ ಎಂದು ಹೇಳಿದ್ದಾರೆ.

ಡಿ.ಕೆ.  ಶಿವಕುಮಾರ್ ಅವರ ಅಕ್ರಮ ಆಸ್ತಿ, ಹಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಸಿಡಿ ಇಟ್ಟುಕೊಂಡು ಡಿಕೆಶಿ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮುಂದೆ ಸಿದ್ದರಾಮಯ್ಯನಂತವರೇ ಮಾತನಾಡಲು ಆಗಲ್ಲ, ಎಲ್ಲರನ್ನೂ ಸಿಡಿ ಮೂಲಕವೇ ಆಪರೇಟ್ ಮಾಡ್ತಾರೆ. ಡಿ.ಕೆ.ಶಿವಕುಮಾರ್ ಸಿಡಿ ಗ್ಯಾಂಗ್ ಕ್ಯಾಪ್ಟನ್. ಇಂತಹ ಫ್ರಾಡ್ ಇಟ್ಕೊಂಡು ಕಾಂಗ್ರೆಸ್ ನವರು ರಾಜಕೀಯ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕನಕಪುರದಲ್ಲಿ ಡಿ.ಕೆ. ಶಿವಕುಮಾರ್ ಬ್ಲ್ಯೂ ಫಿಲ್ಮ್ ತೋರಿಸುತ್ತಿದ್ದರು. 100 ರೂಪಾಯಿ ಕೊಟ್ಟು ಬ್ಲ್ಯೂ ಫಿಲ್ಮ್ ತೋರಿಸುತ್ತಿದ್ದರು ಎಂದು ಆರೋಪಿಸಿರುವ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...