alex Certify BIG NEWS: ಇಂದಿನಿಂದ ಜೆಡಿಎಸ್ ‘ಪಂಚರತ್ನ’ ರಥಯಾತ್ರೆ; 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ಜೆಡಿಎಸ್ ‘ಪಂಚರತ್ನ’ ರಥಯಾತ್ರೆ; 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ ‘ಪಂಚರತ್ನ’ ರಥಯಾತ್ರೆಯನ್ನು ಕೋಲಾರದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈಗಿನಿಂದಲೇ ಚುನಾವಣಾ ಪ್ರಚಾರ ಆರಂಭಿಸುವ ಸಲುವಾಗಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇಂದು ಮಧ್ಯಾಹ್ನ 2:30ಕ್ಕೆ ಮುಳಬಾಗಿಲು ನಗರದ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಜೆಡಿಎಸ್ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...