alex Certify BIG NEWS: ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭ; ಅಭ್ಯರ್ಥಿಗಳಿಗೆ ಶುಭ ಹಾರೈಸಿದ ನಟ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭ; ಅಭ್ಯರ್ಥಿಗಳಿಗೆ ಶುಭ ಹಾರೈಸಿದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, ಇಂದಿನಿಂದ ನನ್ನ ಚುನಾವಣಾ ಪ್ರಚಾರ ಆರಂಭವಾಗಲಿದೆ. ನಿರಂತರವಾಗಿ ಒಂದಾದ ಮೇಲೊಂದರೆಂತೆ ರೋಡ್ ಶೋ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್, ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ. ನಾನು ಹೋದಕಡೆ ಜನರು ತುಂಬಾ ಪ್ರೀತಿ ತೋರುತ್ತಾರೆ. ಜನರನ್ನು ಭೇಟಿಯಾಗುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಹೇಳಿದರು.

ಬೆಳಿಗ್ಗೆ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರ ನಡೆಸಲಿರುವ ಕಿಚ್ಚ ಸುದೀಪ್, ಬಳಿಕ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ರೋಡ್ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಾಯಕೊಂಡನಹಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಪ್ರಚಾರ ನಡೆಸಲಿದ್ದಾರೆ. ಬಳಿಕ ಬಳ್ಳಾರಿಯ ಸಂಡೂರಿನಲ್ಲಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...