ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 17 ದಿನಗಳ ಕಾಲ ನಡೆಯಲಿದೆ. ಡಿಸೆಂಬರ್ 29ರ ವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಒಟ್ಟು 16 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ವಿರೋಧ ಪಕ್ಷಗಳು ಸಜ್ಜಾಗಿದ್ದು, ಇದರ ಮಧ್ಯೆಯೇ ಅಂದರೆ ಡಿಸೆಂಬರ್ 8ರ ನಾಳೆ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ.
ಈಗಿನ ಸಂಸತ್ ಭವನದಲ್ಲಿ ನಡೆಯಲಿರುವ ಕಡೆಯ ಅಧಿವೇಶನ ಇದಾಗುವ ಸಾಧ್ಯತೆಯಿದ್ದು, ಮುಂದಿನ ಬಜೆಟ್ ಅಧಿವೇಶನ ನೂತನ ಸಂಸತ್ ಭವನದಲ್ಲಿ ನಡೆಯುವ ನಿರೀಕ್ಷೆ ಇದೆ. ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷ ಬಿಜೆಪಿ, ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ.