ಬೆಂಗಳೂರು: ದೆಹಲಿಗೆ ಶಾಸಕರ ನಿಯೋಗ ಕೊಂಡೊಯ್ಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಇಂದಿನ ರಾಜಕಾರಣವೇ ಬೇಸರವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಬಂಪರ್ ಕೊಡುಗೆ ಸಿಕ್ಕಿದೆ. ರಾಜ್ಯಕ್ಕೆ ಅವಕಾಶ ನೀಡಿದ್ದನ್ನು ಸ್ವಾಗತಿಸುತ್ತೇವೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮತೋಲನೆಗೆ ಆದ್ಯತೆ ನೀಡಲಾಗಿದೆ ಎಂದರು.
SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಇದೇ ವೇಳೆ ಕೇಂದ್ರ ಸಂಪುಟದಿಂದ ಡಿ.ವಿ.ಸದಾನಂದಗೌಡರನ್ನು ಕೈಬಿಟ್ಟ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ ರೇಣುಕಾಚಾರ್ಯ, ರಾಷ್ಟ್ರ ರಾಜಕಾರಣ ಮಾತನಾಡುವಷ್ಟು ದೊಡ್ಡವನಲ್ಲ. ಇಂದಿನ ರಾಜಕಾರಣದಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ರಾಜಕಾರಣದ ಬಗ್ಗೆ ಮಾತನಾಡಲು ಅಸಹ್ಯವಾಗುತ್ತಿದೆ ಎಂದು ಹೇಳಿದರು.