
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ.
ಇಂದಿರಾ ಕ್ಯಾಂಟೀನ್ ಗೆ ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ವೇಳೆ ಹೆಚ್ಚಿನ ಹಣ ಪಡೆಯುತ್ತಿರುವುದು, ಆಹಾರ ಗುಣ ಮಟ್ಟದ ಬಗ್ಗೆಯೂ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಇವುಗಳಿಗೆ ಕಡಿವಾಣ ಹಾಕಲು ಅಧಿಕಾರಿ ನೇಮಕ ಮಾಡಲು ಮುಂದಾಗಿದೆ.
ಆಹಾರದ ಗುಣಮಟ್ಟ ಪರಿಶೀಲನೆ, ಸ್ವಚ್ಚತೆ ಬಗ್ಗೆ ನಿಗಾ, ಹೆಚ್ಚಿನ ಹಣ ಪಡೆಯದಂತೆ ನೋಡಿಕೊಳ್ಳುವುದು, ಅವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಪ್ರತಿ ಇಂದಿರಾ ಕ್ಯಾಂಟೀನ್ ಗೆ ಓರ್ವ ಅಧಿಕಾರಿ ನೇಮಕ ಮಾಡಲಿದೆ ಎಂದು ತಿಳಿದುಬಂದಿದೆ.
ಅಲ್ಲದೇ ಇಂದಿರಾ ಕ್ಯಾಂಟೀನ್ ಗೆ ಹೊಸ ಸಹಾಯವಾಣಿ ಆರಂಭಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.