ಬೆಂಗಳೂರು: ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮನವಿ ಮಾಡಿದ್ದಾರೆ.
ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸಲು ಯಾವುದೇ ಯೋಚನೆ ಮಾಡುವ ಅಗತ್ಯವಿಲ್ಲ. ಕನ್ನಡಿಗರು ಊಟ ಮಾಡುವಾಗ ಇಂದಿರಾ ಗಾಂಧಿಯ ಕರಾಳ ದಿನ ನೆನಪು ಮಾಡಿಕೊಳ್ಳುವುದು ಬೇಡ. ಹಾಗಾಗಿ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ ಎಂದು ಒತ್ತಾಯಿಸಿದ್ದಾರೆ.
ನೆನೆಗುದಿಗೆ ಬಿದ್ದಿರುವ ಬ್ರಾಹ್ಮಣೇತರ ಪೂಜಾರಿಗಳ ನೇಮಕಾತಿ
ಈ ಹಿಂದೆ ಇಂದಿರಾ ಕ್ಯಾಂಟೀನ್ ಹೆಸರಲ್ಲಿ ಕಾಂಗ್ರೆಸ್ ಅವ್ಯವಹಾರ ನಡೆಸಿದ್ದು, ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿದ್ದ ಸಿ.ಟಿ.ರವಿ, ಇದೀಗ ಇಂದಿರಾ ಕ್ಯಾಂಟೀನ್ ಹೆಸರನ್ನೇ ಬದಲಿಸುವಂತೆ ಆಗ್ರಹಿಸಿದ್ದಾರೆ.