ಬೆಂಗಳೂರು: ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವ ಬಗ್ಗೆ ಹೇಳಿಕೆ ನಿಡುತ್ತಿದ್ದಾರೆ. ಸರ್ಕಾರ ಇಂತಹ ನಿರ್ಧಾರಗಳನ್ನು ಕೈಗೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸಿದರೆ ಬಿಜೆಪಿ ನಿರೀಕ್ಷೆ ಮಾಡದಂತಹ ರೀತಿಯಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಜನರೇ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಇನ್ನು ಸಚಿವ ಕೆ.ಎಸ್.ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ತಂಟೆಗೆ ಬಂದರೆ ತಿರುಗಿ ಹೊಡೆಯಿರಿ, ಯಾವುದರಲ್ಲಿ ಹೊಡಿತಾರೋ ಅದರಲ್ಲೇ ಹೊಡೆದು ತೆಗೆಯಿರಿ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಬಿಜೆಪಿ ಸಂಸ್ಕೃತಿಯನ್ನು ತೋರುತ್ತದೆ ಎಂದು ವಾಗ್ದಾಳಿ ನಡೆಸಿದರು.