alex Certify BIG NEWS: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ; ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ; ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವ ಬಗ್ಗೆ ಹೇಳಿಕೆ ನಿಡುತ್ತಿದ್ದಾರೆ. ಸರ್ಕಾರ ಇಂತಹ ನಿರ್ಧಾರಗಳನ್ನು ಕೈಗೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸಿದರೆ ಬಿಜೆಪಿ ನಿರೀಕ್ಷೆ ಮಾಡದಂತಹ ರೀತಿಯಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಜನರೇ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಇನ್ನು ಸಚಿವ ಕೆ.ಎಸ್.ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ತಂಟೆಗೆ ಬಂದರೆ ತಿರುಗಿ ಹೊಡೆಯಿರಿ, ಯಾವುದರಲ್ಲಿ ಹೊಡಿತಾರೋ ಅದರಲ್ಲೇ ಹೊಡೆದು ತೆಗೆಯಿರಿ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಬಿಜೆಪಿ ಸಂಸ್ಕೃತಿಯನ್ನು ತೋರುತ್ತದೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...