alex Certify BIG NEWS: ಇಂದು ನಡೆಯಲಿರುವ ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ನಡೆಯಲಿರುವ ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ

ಕಳೆದ ರಾತ್ರಿ ವಿಧಿವಶರಾದ ತಮ್ಮ ಸಚಿವ ಸಂಪುಟ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 10.30 ಕ್ಕೆ ಬೆಳಗಾವಿಗೆ ತೆರಳಲಿದ್ದಾರೆ.

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲಾಗುತಿದ್ದು, ಮೊದಲಿಗೆ ಉಮೇಶ್ ಕತ್ತಿ ಮಾಲೀಕತ್ವದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ.

ಆ ಬಳಿಕ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...