ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಇಂದು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆಯಾಗಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಇನ್ನು 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.
ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲ್ಲ, ಇನ್ನು 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದರು.
ಯುಗಾದಿ ಹಬ್ಬದ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು.