alex Certify BIG NEWS: ಇಂದು ಬಿಡುಗಡೆಯಾಗಬೇಕಿದ್ದ ʼಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಬಿಡುಗಡೆಯಾಗಬೇಕಿದ್ದ ʼಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಇಂದು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆಯಾಗಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಇನ್ನು 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲ್ಲ, ಇನ್ನು 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

ಯುಗಾದಿ ಹಬ್ಬದ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...