
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಗೆ ವಿದ್ಯಾರ್ಥಿಗಳು ಕರೆ ನೀಡಿದ್ದಾರೆ.
ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಗೆ ಕರೆ ನೀಡಿದ್ದು, ವಿಶ್ವ ವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ವಿಶ್ವವಿದ್ಯಾಲಯ ಹಾಗೂ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಂದ್ ಗೆ ಕರೆ ಕೊಟ್ಟಿದ್ದಾರೆ.