alex Certify BIG NEWS: ಇಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ; ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ; ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಲಿದ್ದು, 3,800 ಕೋಟಿ ರೂಪಾಯಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿಯವರ ಮಂಗಳೂರು ಭೇಟಿಗೆ ಸ್ವಾಗತ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ? ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906) ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925) ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931) ಪ್ರಧಾನಿ ಮೋದಿಯವರೇ ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.
ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ಮೋದಿಯವರೇ ಇದು ವಿಕಾಸವೋ? ವಿನಾಶವೋ? ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಇದು ವಿಕಾಸನೋ? ವಿನಾಶನೋ? ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ ? ಎಂದು ಕೇಳಿದ್ದಾರೆ.

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ.

ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳೀನ್ ಕಟೀಲ್ ಇದು ವಿಕಾಸವೋ? ವಿನಾಶವೋ ? ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು.. ಪ್ರಧನೈ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ? ಎಂದು ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...