ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಸಿಬಿಐ ನಿಂದ ಬಂಧನಕ್ಕೀಡಾಗಿದ್ದ ವಿನಯ್ ಕುಲಕರ್ಣಿ ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದರು. ಇದೀಗ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಡುಗಡೆಯಾಗಲಿದ್ದಾರೆ.
ವಿನಯ್ ಕುಲಕರ್ಣಿ ಎರಡು ದಿನಗಳ ಹಿಂದೆಯೇ ಬಿಡುಗಡೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಜೈಲಧಿಕಾರಿಗಳಿಗೆ ಬೇಲ್ ಪ್ರತಿ ಲಭ್ಯವಾಗಿರಲಿಲ್ಲ. ಇದೀಗ ಬೇಲ್ ಪ್ರತಿ ಲಭ್ಯವಾಗಿದ್ದು, ಇಂದು ಬೆಳಿಗ್ಗೆ 11ಗಂಟೆಗೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಧಾರವಾಡದಿಂದ ವಿನಯ್ ಅಭಿಮಾನಿಗಳು ಜೈಲಿನ ಬಳಿ ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಜೈಲಿನ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.