ಕಾಲು ನೋವಿನ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅವರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಲಿದ್ದಾರೆ.
ಮಧ್ಯಾಹ್ನ ಊಟದ ಬಿಡುವಿನಲ್ಲಿ ಬಸವರಾಜ ಬೊಮ್ಮಾಯಿಯವರು ದೇವೇಗೌಡರ ನಿವಾಸಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿದ್ದು, ಈ ಸಂದರ್ಭದಲ್ಲಿ ಕೆಲ ಸಚಿವರು ಮುಖ್ಯಮಂತ್ರಿಗಳೊಂದಿಗೆ ಹಾಜರಿರಲಿದ್ದಾರೆ.
ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ನಾಯಕರು ದೇವೇಗೌಡರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ.