ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣಕ್ಕೆ ಎಂಟ್ರಿ ಕೊಟ್ಟಿದೆ. ಭಾರತ್ ಜೋಡೋ ಯಾತ್ರೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸೋನಿಯಾ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಇಂದು ಸಂಜೆ ಕೊಡಗಿಗೆ ತೆರಳಲಿದ್ದಾರೆ.
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಕೆ ಜೆ.ಜಾರ್ಜ್ ಪುತ್ರನ ಒಡೆತನದ ಕೂರ್ಗ್ ವೈಲ್ಡರ್ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಎರಡು ದಿನಗಳ ಕಾಲ ಸೋನಿಯಾ ಗಾಂಧಿ ಕೊಡಗಿನಲ್ಲಿ ವಾಸ್ತವ್ಯವಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.