ಬೆಂಗಳೂರು: ಗಡಿ ಜಿಲ್ಲೆಗಳಲ್ಲಿಯೇ ಕೊರೊನಾ ಸೋಂಕು ಕಟ್ಟಿಹಾಕಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜೊತೆಗೆ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ.
ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಮಿತಿ ಮೀರಿದ್ದು, ಈ ನಡುವೆ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.
ಒಂದೇ ಬಾರಿ 300 ಬರ್ಗರ್ ಮತ್ತು 100 ಡ್ರಿಂಕ್ಸ್ ಆರ್ಡರ್ ಮಾಡಿದ ಗ್ರಾಹಕ
ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು ಹಾಗೂ ಬೆಳಗಾವಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 9 ಗಂಟೆಯಿಂದಲೇ ಅಂಗಡಿ ಮುಂಗಟ್ಟು, ಹೋಟೇಲ್, ಬಾರ್, ರೆಸ್ಟೋರೆಂಟ್ ಥಿಯೇಟರ್, ಮಾಲ್ ಗಳು ಬಂದ್ ಆಗಲಿವೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೂ ವಿಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.