
ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ಪ್ರಕರಣದ ಕುರಿತಂತೆ ಇಂದು ಹೈಕೋರ್ಟ್ ತೀರ್ಪು ನೀಡಲಿದೆ.
ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ಇಡೀ ದೇಶದ ಜನರ ಚಿತ್ತ ಹೈಕೋರ್ಟಿನತ್ತ ನೆಟ್ಟಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಒಂದು ವಾರ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೈಸೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಗದಗ, ಕಲಬುರ್ಗಿ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ಬೆಳಗಾವಿ, ಧಾರವಾಡ, ರಾಮನಗರ, ವಿಜಯಪುರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಧಾರವಾಡ, ಉತ್ತರಕನ್ನಡ, ರಾಯಚೂರು, ಶಿವಮೊಗ್ಗ, ಹಾಸನ, ತುಮಕೂರು, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.