ಬೆಂಗಳೂರು: ಇಂಧನದ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಇಂಧನ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕ್ರಮವಾಗಿ 10 ರೂಪಾಯಿ ಹಾಗೂ 5 ರೂಪಾಯಿ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆ ಮಾಡುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಇಂಧನ ಮಾರಾಟ ತೆರಿಗೆ ಇಳಿಸಿ ಅಧಿಸೂಚನೆ ಹೊರಡಿಸಿದೆ.
ಈ ಮೂಲಕ 114 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100.63ರೂ ಗೆ ಇಳಿಕೆಯಾದಂತಾಗಿದೆ. ಅಂದರೆ ರಾಜ್ಯದಲ್ಲಿ ಲೀಟರ್ ಪೆಟ್ರೋಲ್ ಬೆಲೆ ಒಟ್ಟು 13 ರೂಪಾಯಿ 30 ಪೈಸೆ ಕಡಿತವಾಗಿದ್ದರೆ ಲೀಟರ್ ಡೀಸೆಲ್ ದರದಲ್ಲಿ ಒಟ್ಟು 19ರೂಪಾಯಿ 47 ಪೈಸೆ ಇಳಿಕೆಯಾದಂತಾಗಿದೆ.