alex Certify BIG NEWS: ಇಂಧನದ ಮೇಲಿನ ವ್ಯಾಟ್ ಇಳಿಕೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂಧನದ ಮೇಲಿನ ವ್ಯಾಟ್ ಇಳಿಕೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಇಂಧನದ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಇಂಧನ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕ್ರಮವಾಗಿ 10 ರೂಪಾಯಿ ಹಾಗೂ 5 ರೂಪಾಯಿ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆ ಮಾಡುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಇಂಧನ ಮಾರಾಟ ತೆರಿಗೆ ಇಳಿಸಿ ಅಧಿಸೂಚನೆ ಹೊರಡಿಸಿದೆ.

ಈ ಮೂಲಕ 114 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100.63ರೂ ಗೆ ಇಳಿಕೆಯಾದಂತಾಗಿದೆ. ಅಂದರೆ ರಾಜ್ಯದಲ್ಲಿ ಲೀಟರ್ ಪೆಟ್ರೋಲ್ ಬೆಲೆ ಒಟ್ಟು 13 ರೂಪಾಯಿ 30 ಪೈಸೆ ಕಡಿತವಾಗಿದ್ದರೆ ಲೀಟರ್ ಡೀಸೆಲ್ ದರದಲ್ಲಿ ಒಟ್ಟು 19ರೂಪಾಯಿ 47 ಪೈಸೆ ಇಳಿಕೆಯಾದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...