alex Certify BIG NEWS: ಇದು ನನ್ನ ಕೊನೇ ಚುನಾವಣೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ನನ್ನ ಕೊನೇ ಚುನಾವಣೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ವಾರ ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರ ಮತ ಬೇಟೆ ಜೋರಾಗಿ ಸಾಗಿದೆ.

ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದು ನನ್ನ ಕೊನೇ ಚುನಾವಣೆ ಎಂದು ಘೋಷಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿರುವ ಜಗದೀಶ್ ಶೆಟ್ಟರ್, ಇದು ನನ್ನ ಕೊನೇ ಚುನಾವಣೆ. ನಾನು 7ನೇ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಅಗತ್ಯವಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...