ಮೈಸೂರು: ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ, ಗುಜರಾತ್ ನಲ್ಲಿ ಬಿಜೆಪಿಯೇ ಗೆಲ್ಲುತ್ತೆ ಎಂಬ ನಿರೀಕ್ಷೆ ಇತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿಯೇ ಫಂಡಿಂಗ್ ಮಾಡಿದೆ. ಚುನಾವಣೆಗಾಗಿ ಆಪ್ ಬಹಳ ಹಣ ಖರ್ಚು ಮಾಡಿದೆ. ಅಷ್ಟು ಹಣ ಖರ್ಚು ಮಾಡಿದರೂ ಕೇವಲ 6 ಸ್ಥಾನಗಳನ್ನು ಮಾತ್ರ ಪಡೆದಿದೆ. ಆಮ್ ಆದ್ಮಿ ಪಕ್ಷದಿಂದ ಮತ ವಿಭಜನೆಯಾಗಿದೆ ಅಷ್ಟೇ. ಒಂದು ರಾಜ್ಯದ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀರಲ್ಲ. ಗುಜರಾತ್ ನ್ನು ಕರ್ನಾಟಕ್ಕೆ ಹೋಲಿಕೆ ಮಾಡುವುದು ಬೇಡ ಎಂದು ಹೇಳಿದರು.
ಕರ್ನಾಟಕದ ಕಾಂಗ್ರೆಸ್ ಪಕ್ಷದ ಸಂಘಟನೆ ಶಕ್ತಿಯುತವಾಗಿದೆ. ಇಲ್ಲಿರುವುದು ಭ್ರಷ್ಟ ಬಿಜೆಪಿ ಸರ್ಕಾರ. ಜೆಡಿಎಸ್ ಜೊತೆ ಸೇರಿ ಬಿಜೆಪಿ ತಂತ್ರಗಾರಿಕೆ ನಡೆಸಬಹುದು ಆದರೆ ನಡೆಯಲ್ಲ. ಕರ್ನಾಟಕದಲ್ಲಿ ಸೋಲುತ್ತೇವೆ ಎಂದು ಬಿಜೆಪಿಗೆ ಗೊತ್ತಿದೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಹಿಮಾಚಲಪ್ರದೆಶದಲ್ಲಿ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಗೆ ಪ್ಲಸ್ ಆಗಿದೆ ಎಂದು ಹೇಳಿದರು.