ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯ ಅಂತಿಮ ಸುತ್ತಿಗೆ ಇದೇ ಮೊದಲ ಬಾರಿಗೆ ನಾಲ್ಕು ಭಾರತೀಯ ಚಿತ್ರಗಳು ಆಯ್ಕೆಯಾಗಿದ್ದು, ಪ್ರಶಸ್ತಿ ಗೆಲ್ಲುವ ನಿರೀಕ್ಷೆ ಗರಿಗೆದರಿದೆ.
ಗುಜರಾತಿ ಚಿತ್ರ ‘ಛೆಲ್ಲೋ ಶೋ’, ರಾಜ ಮೌಳಿ ನಿರ್ದೇಶನದ, ಜೂನಿಯರ್ ಎನ್.ಟಿ.ಆರ್. ಹಾಗೂ ರಾಮ್ ಚರಣ್ ಅಭಿನಯದ ಆರ್ ಆರ್ ಆರ್ ಸೇರಿದಂತೆ ಒಟ್ಟು ನಾಲ್ಕು ಚಿತ್ರಗಳು ಪ್ರಶಸ್ತಿ ಸುತ್ತಿನಲ್ಲಿ ಆಯ್ಕೆಯಾಗಿವೆ.
‘ಛೆಲ್ಲೋ ಶೋ’ ಅತ್ಯುತ್ತಮ ಅಂತರಾಷ್ಟ್ರೀಯ ಚಿತ್ರ ವಿಭಾಗದಲ್ಲಿ ಆಯ್ಕೆಯಾಗಿದ್ದರೆ, ಆರ್ ಆರ್ ಚಿತ್ರದ ‘ನಾಟು ನಾಟು’ ಅತ್ಯುತ್ತಮ ಗೀತೆ ವಿಭಾಗದಲ್ಲಿ ಸ್ಥಾನ ಪಡೆದಿದೆ. ಇನ್ನು ಸಾಕ್ಷ್ಯ ಚಿತ್ರ ವಿಭಾಗದಲ್ಲಿ ‘ಆಲ್ ದಟ್ ಬ್ರೀಥ್ಸ್’ ಮತ್ತು ಕಿರು ಸಾಕ್ಷ್ಯ ಚಿತ್ರ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್’ ಸ್ಥಾನ ಪಡೆದಿದೆ.