ಬೆಂಗಳೂರು: ಯಾರಿಗೂ ಹೊರೆಯಾಗದ ಜನಸ್ನೇಹಿ ಬಜೆಟ್ ಇದಾಗಿದ್ದು, ಅತ್ಯಂತ ಸಂಕಷ್ಟದ ಸಂದರ್ಭದಲ್ಲಿ ಮಂಡಿಸಿದ ಐತಿಹಾಸಿಕ ಬಜೆಟ್ ಇದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕರ್ನಾಟಕ ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಬಜೆಟ್ ನಲ್ಲಿ ಎಲ್ಲ ಜಿಲ್ಲೆ, ಸಮುದಾಯಗಳಿಗೆ ಅನುದಾನ ನೀಡಿದ್ದೇನೆ. ಸಮತೋನಲ ಕಾಪಾಡಿಕೊಳ್ಳಲು ಪ್ರಯತ್ನ ಮಾಡಲಾಗಿದೆ. ಯಾರಿಗೂ ಒಂದು ರೂಪಾಯಿ ತೆರಿಗೆ ಹಾಕಿಲ್ಲ. ಈ ಬಾರಿಯೂ ವಲಯವಾರು ವಿಂಗಡಿಸಿ ಬಜೆಟ್ ಮಂಡಿಸಿದ್ದೇನೆ ಎಂದರು.
ಕರ್ನಾಟಕ ಬಜೆಟ್ 2021-22: ಮುಖ್ಯಾಂಶಗಳು
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗಾಗಿ 31,028 ಕೋಟಿ, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 62,150 ಕೋಟಿ, ಆರ್ಥಿಕಾಭಿವೃದ್ಧಿಗೆ 52, 529 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿ 7,795 ಕೋಟಿ, ಸಂಸಕೃತಿ, ಪರಂಪರೆ, ನೈಸರ್ಗಿಕ ಸಂಪನ್ಮೂಲ ವಲಯಕ್ಕೆ ಬಜೆಟ್ ನಲ್ಲಿ 2,645 ಕೋಟಿ ಮೀಸಲಿಡಲಾಗಿದೆ. ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ ವಲಯಕ್ಕೆ 52,519 ಕೋಟಿ ಮೀಸಲು ಹಾಗೂ ಮಹಿಳೆಯರಿಗಾಗಿ 37,188 ಕೋಟಿ ಅನುದಾನ ಘೋಷಿಸಲಾಗಿದೆ ಎಂದು ವಿವರಿಸಿದರು.