alex Certify BIG NEWS: ಇನ್ನೂ 5 ದಿನ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನೂ 5 ದಿನ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದೆ.

ರಾಜಧಾನಿ ಬೆಂಗಳುರಿನಲ್ಲಿ 5 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದಿನಿಂದ 5 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ 3 ದಿನ ಮಳೆಯಾಗಲಿದ್ದರೆ, ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮತ್ತೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೂ 5 ದಿನ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...