ಶಿವಮೊಗ್ಗ; ವಿಧನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಗ್ರೆಸ್ ಪಕ್ಷಗಳು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ಎರಡು ದಿನಗಳ ಕಾಲ ಕೋರ್ ಕಮಿಟಿ ಸಭೆ ನಡೆಸಲಾಗಿದ್ದು, ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದೆ. ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಜನರ ಅಪೇಕ್ಷೆಯಂತೆ ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.