ಕಾಂಗ್ರೆಸಿನವರ ‘ಪೇಸಿಎಂ’ ಪೋಸ್ಟರ್ ಅಭಿಯಾನಕ್ಕೆ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೊದಲಿಗೆ ‘ಪೇಸಿಎಂ’ ಮಾಡಿದ ಕಾಂಗ್ರೆಸ್ಸಿಗರು ಈಗ ಪೇ ಟು ಕಾಂಗ್ರೆಸ್ ಮೇಡಂ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಕ್ಕೆ ಹೊಡೆದಾಡಬೇಕೆ ಹೊರತು ಇಂತಹ ವಿಷಯಗಳಿಗೆ ಅಲ್ಲ ಎಂದು ಅಭಿಪ್ರಾಯಪಟ್ಟರು.
ಈಗ ಏನಿದ್ದರೂ ಅಭಿವೃದ್ಧಿಯ ಕಾಲ, ಪ್ರಧಾನಿ ನರೇಂದ್ರ ಮೋದಿ ಅವರದ್ದೇ ಕಾಲ ಎಂದು ಹೇಳಿದ ಪ್ರತಾಪ್ ಸಿಂಹ, ಕಾಂಗ್ರೆಸ್ ನಾಯಕರು ತಮ್ಮ ಧೋರಣೆ ಬದಲಿಸಿಕೊಳ್ಳದಿದ್ದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.