alex Certify BIG NEWS: ಇನ್ನೊಂದು ವಾರದಲ್ಲಿ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನೊಂದು ವಾರದಲ್ಲಿ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯೂ ಫೈನಲ್ ಆಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಇಂದು ಬಿಜೆಪಿ ನಾಯಕರ ಮಹತ್ವದ ಸಭೆ ನಡೆದಿದ್ದು, ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇನ್ನೊಂದು ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಚುನಾವಣೆ ಎದುರಿಸಲು ಬಿಜೆಪಿ ಸರ್ವಸನ್ನದ್ಧವಾಗಿದೆ. ಚುನಾವಣೆ ಘೋಷಣೆಗೂ ಮುಂಚಿತವಾಗಿಯೇ ಬಿಜೆಪಿ ಎಲ್ಲಾ ರೀತಿಯಲ್ಲಿಯೂ ಸಿದ್ಧತೆ ಮಾಡಿಕೊಂಡಿದೆ. ಅಭ್ಯರ್ಥಿಗಳ ಪಟ್ಟಿಯೂ ಅಂತಿಮವಾಗಿದೆ. ವಾರದೊಳಗೆ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...