ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಪದೇ ಪದೇ ಇಂತಹ ಹಲವು ಘಟನೆಗಳು ನಡೆಯುತ್ತಿರುವುದು ದುರಂತ. ಘಟನೆ ಬೇಸರ ತಂದಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಚಿತ್ರೀಕರಣದ ವೇಳೆ ಕೆಲವರು ನಿಯಮಗಳನ್ನು ಪಾಲಿಸುತ್ತಿಲ್ಲ. ಇಂತಹ ಅನೇಕ ಅವಘಡಗಳು ಮತ್ತೆ ಮತ್ತೆ ಸಂಭವಿಸುತ್ತಿವೆ. ಹಾಗಾಗಿ ಚಿತ್ರೀಕರಣದ ವೇಳೆ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದರು.
‘ಭಾಗ್ಯಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್: ‘ಸುಕನ್ಯಾ ಸಮೃದ್ಧಿ’ಗೆ ಸೇರಿದ್ರೂ ಸಿಕ್ಕಿಲ್ಲ ಬಾಂಡ್, ಪಾಸ್ ಬುಕ್
ಒಂದೆರಡು ದಿನಗಳಲ್ಲಿ ಕಠಿಣ ನಿಯಮಗಳ ಬಗ್ಗೆ ಆದೇಶ ಹೊರಡಿಸಲಾಗುವುದು. ಇನ್ಮುಂದೆ ಶೂಟಿಂಗ್ ವೇಳೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.