ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ ವೆಸ್ಟ್ ಕರ್ನಾಟಕ-2022ರಲ್ಲಿ ಒಟ್ಟು 9.82 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಇನ್ ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಸಿಂಗಲ್ ವಿಂಡೋದಲ್ಲಿ 2,83,415 ಕೋಟಿ ಒಡಂಬಡಿಕೆಯಾಗಿದೆ. ಸರ್ಕಾರದ ಜೊತೆ 5,41,369 ಕೋಟಿ ಒಡಂಬಡಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 9,81,784 ಕೋಟಿ ರೂ. ಹೂಡಿಕೆಯಾಗಲಿದೆ. 6 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ಶೇ.90ರಷ್ಟು ಇತರ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ಮಾಡಲಾಗುತ್ತಿದೆ. ಇಂಧನ ಕ್ಷೇತ್ರದಲ್ಲಿ ಶೇ.38, ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಶೇ.33, ಮೂಲಸೌಕರ್ಯ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಶೇ.9 ಹೂಡಿಕೆಯಾಗಲಿದೆ ಎಂದು ತಿಳಿಸಿದರು.