alex Certify BIG NEWS: ಇಬ್ಬರು ಮಕ್ಕಳಲ್ಲಿ ನೊರೊವೈರಸ್ ದೃಢ; ಕೇರಳದಲ್ಲಿ ಮತ್ತೆ ಆರಂಭವಾಯ್ತು ಹೊಸ ಸಾಂಕ್ರಾಮಿಕ ರೋಗದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಬ್ಬರು ಮಕ್ಕಳಲ್ಲಿ ನೊರೊವೈರಸ್ ದೃಢ; ಕೇರಳದಲ್ಲಿ ಮತ್ತೆ ಆರಂಭವಾಯ್ತು ಹೊಸ ಸಾಂಕ್ರಾಮಿಕ ರೋಗದ ಆತಂಕ

ತಿರುವನಂತಪುರಂ: ವಿಷಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೇರಳದ 8 ಮಕ್ಕಳ ಪೈಕಿ ಇದೀಗ ಇಬ್ಬರು ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ನೊರೊವೈರಸ್ ಪತ್ತೆಯಾಗಿದ್ದು, ಹೊಸ ಆತಂಕ ಸೃಷ್ಟಿಸಿದೆ.

ಆಲಪ್ಪುಳ ಜಿಲ್ಲೆಯ ಕಾಯಂಕುಲಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8 ಮಕ್ಕಳು ವಿಷಾಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ ಇಬ್ಬರು ಮಕ್ಕಳಲ್ಲಿ ಇದೀಗ ನೊರೊವೈರಸ್ ದೃಢಪಟ್ಟಿದೆ. ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ ವೈರಸ್ ಹರಡುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

BIG NEWS: ಕಲುಷಿತ ನೀರು ಸೇವಿಸಿ ಮೂವರ ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಆಹಾರ ಹಾಗೂ ಕಲುಷಿತ ನೀರಿನಿಂದಾಗಿ ಈ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಆದರೆ ಈ ರೋಗವನ್ನು ಗುಣಪಡಿಸಬಹುದಾಗಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...