ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನ ಹಳ್ಳಿಯ ತಾಂಡಾದಲ್ಲಿ ಈ ದುರಂತ ಸಂಭವಿಸಿದೆ. ಮೀರಾಬಾಯಿ (25) ಹಾಗೂ ಮಕ್ಕಳಾದ ನಚ್ಚುಬಾಯಿ (3), ಗೋಲುಬಾಯಿ (2) ಮೃತರು.
ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳಿಗೆ ವಿಷವುಣಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.