alex Certify BIG NEWS: ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ತುಮಕೂರು: ಪತಿಯ ಕುಡಿತದ ಚಟಕ್ಕೆ ಮನನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಉಪ್ಪಾರಹಳ್ಳಿ ತಾಂಡಾದಲ್ಲಿ ನಡೆದಿದೆ.

ಬುಜ್ಜಿ ಬಾಯಿ (35) ಹಾಗೂ ಮಕ್ಕಳಾದ ಖುಷಿ (9), ಹರ್ಷಿತಾ (6) ಮೃತರು. ಬುಜ್ಜಿ ಬಾಯಿ ಪತಿ ದಿನವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಇಬ್ಬರು ಹೆಣ್ಣು ಮಕ್ಕಳ ಜತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಹಾಗೂ ಮಕ್ಕಳ ಶವಕ್ಕಾಗಿ ಹುಡುಕಾಟ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...