alex Certify BIG NEWS: ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ; ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ; ಸರ್ಕಾರಕ್ಕೆ ಸವಾಲು ಹಾಕಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ; ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ; ಸರ್ಕಾರಕ್ಕೆ ಸವಾಲು ಹಾಕಿದ ಸಿದ್ದರಾಮಯ್ಯ

ಬೆಂಗಳೂರು: ಪೇಸಿಎಂ ಹಾಗೂ 40% ಸರ್ಕಾರ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಸರ್ಕಾರದ ವಿರುದ್ಧ ಬಂಡೆದಿದ್ದಾರೆ, ಎಚ್ಚರ..! ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಸಿಎಂ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯವರಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ರಾಜ್ಯ ಬಿಜೆಪಿಗೆ ಸಲ್ಲುತ್ತದೆ. ಏನು ಸಿಎಂ ಬೊಮ್ಮಾಯಿ ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ? ಎಂದು ವಾಕ್ಪ್ರಹಾರ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...