alex Certify BIG NEWS: ಇಷ್ಟು ಕೆಳಮಟ್ಟಕ್ಕೆ ಇಳಿತಾರೆ ಅಂದುಕೊಂಡಿರ್ಲಿಲ್ಲ, ಮುರುಘಾಶ್ರೀ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದ ಬಿ.ಎಸ್.ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಷ್ಟು ಕೆಳಮಟ್ಟಕ್ಕೆ ಇಳಿತಾರೆ ಅಂದುಕೊಂಡಿರ್ಲಿಲ್ಲ, ಮುರುಘಾಶ್ರೀ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದ ಬಿ.ಎಸ್.ಯಡಿಯೂರಪ್ಪ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಸ್ವಾಮೀಜಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ಉಡುಪಿ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಯಡಿಯೂರಪ್ಪ, ಮುರುಘಾಶ್ರೀ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರಿಕ್ಷಿಸಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಹಿಂದೂ ಧರ್ಮದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಪಮಾನ ಮಾಡುವ ರೀತಿ ಹೇಳಿಕೆ ಕೊಟ್ಟಿದ್ದು ಖಂಡನೀಯ. ಕಾಂಗ್ರೆಸ್ ನಾಯಕರು ಸತೀಶ್ ಹೇಳಿಕೆಯನ್ನು ಖಂಡಿಸಿದರೆ ಸಾಲದು. ತಕ್ಷಣ ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...