ಸಕಾಲಕ್ಕೆ ವೇತನ ಪಾವತಿಸುವುದೂ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿಲ್ಲವೆಂದು ಆರೋಪಿಸಿ ಡಯಾಲಿಸಿಸ್ ಸಿಬ್ಬಂದಿ ಆಗಸ್ಟ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಮುಂದಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಇಎಸ್ಐ, ಪಿಎಫ್, ಮಾತೃತ್ವ ರಜೆ ವೇತನ ಹೆಚ್ಚಳ ಮಾಡಿಲ್ಲ ಹಾಗೂ ಸಕಾಲಕ್ಕೆ ವೇತನವನ್ನೂ ಪಾವತಿಸುತ್ತಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.
ರಾಜ್ಯದ 167 ಡಯಾಲಿಸಿಸ್ ಕೇಂದ್ರಗಳಲ್ಲಿ 2017 ರಿಂದ 900 ಸಿಬ್ಬಂದಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮಗಳ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಹೇಳಿರುವ ನೌಕರರು, ವೇತನ ಪರಿಷ್ಕರಣೆ, ಬಾಕಿ ವೇತನ ಪಾವತಿ, ಮಾತೃತ್ವ ರಜೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ.