ರಾಜ್ಯಕ್ಕೆ ಈ ಬಾರಿ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡ ಪರಿಣಾಮ ಮಳೆ ಕ್ಷೀಣವಾಗಿತ್ತು. ಆದರೆ ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂನ್ 17 ರಿಂದ 20 ರ ವರೆಗೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ವ್ಯಾಪಕ ಮಳೆಯಾಗುವ ಸೂಚನೆ ನೀಡಲಾಗಿದೆ.