ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಈ ಬಾರಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಿರಾಸೆ ವ್ಯಕ್ತಪಡಿಸಿದ್ದಾರೆ.
ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ನಾವು ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತೇವೆ. ಜೆಡಿಎಸ್ ನವರು ಕಾಂಗ್ರೆಸ್ ಪಕ್ಷಕ್ಕೆ ಸಪೋರ್ಟ್ ಮಾಡಿದ್ದಾರೆ. ಕಾಂಗ್ರೆಸ್ ಒಳ್ಳೆಯ ಆಡಳಿತ ಕೊಡಲಿ ಎಂಬುದು ನಮ್ಮ ಅಪೇಕ್ಷೆ.
200 ಯುನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ಹಣ, 10 ಕೆಜಿ ಅಕ್ಕಿ ಕೊಡೋದು ಒಳ್ಳೆಯದಲ್ವಾ? ಈಗಲೇ ಪ್ರತಿಕ್ರಿಯೆ ನೀಡುವುದು ಬೇಡ, ಕಾದುನೋಡೋಣ ಎಂದರು.