ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈ ಸೋಲು ಬಿಜೆಪಿಗೆ ಹೊಸದೇನೂ ಅಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸೋಲಿನಿಂದ ಪಕ್ಷದ ಕಾರ್ಯಕರ್ತರು ದೃತಿಗೆಡಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಹೊರತಾಗಿಯೂ ಈ ಫಲಿತಾಂಶ ಬಂದಿರುವ ಬಗ್ಗೆ ಸಮಾಲೋಚಿಸುವುದಾಗಿ ತಿಳಿಸಿದರು.