ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿರುವ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ನಾಲ್ಕು ಪ್ರತ್ಯೇಕ ತಂಡಗಳನ್ನು ರಚನೆ ಮಾಡಿದೆ.
ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆಗಾಗಿ ಕಾರ್ಯಾಚರಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಉಕ್ರೇನ್ ನಲ್ಲಿರುವ ದೇಶದ ಜನತೆಗೆ ಮಹತ್ವದ ಸಂದೇಶ ರವಾನಿಸಿದ್ದು, ವಾಹನಗಳ ಮೇಲೆ ರಾಷ್ಟ್ರಧ್ವಜ ಹಾಕಿಕೊಂಡು ದೇಶದ ಗಡಿ ಚೆಕ್ ಪೋಸ್ಟ್ ಗಳಿಗೆ ಬರುವಂತೆ ಸೂಚನೆ ನೀಡಿದೆ. ಪೋಲೆಂಡ್, ಸ್ಲೋವೊಕಿಯಾ, ರೊಮೇನಿಯಾ, ಹಂಗೇರಿ ಈ ನಾಲ್ಕು ಗಡಿ ಭಾಗಕ್ಕೆ ಬರುವಂತೆ ಭಾರತೀಯರಿಗೆ ರಾಯಭಾರ ಕಚೇರಿ ತಿಳಿಸಿದೆ.
BREAKING: ಉಕ್ರೇನ್ನಲ್ಲಿರುವ ಭಾರತೀಯರ ಸಹಾಯಕ್ಕೆ ಪರ್ಯಾಯ ಮಾರ್ಗ ಹುಡುಕಲು ಮುಂದಾದ ಕೇಂದ್ರ ಸರ್ಕಾರ..!
ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ನಾಲ್ಕು ಪ್ರತ್ಯೇಕ ತಂಡಗಳನ್ನು ರಚನೆ ಮಾಡಿದ್ದು, ನಾಲ್ಕು ತಂಡಗಳು ಉಕ್ರೇನ್ ಗಡಿಗೆ ತೆರಳಿವೆ. ಕೇಂದ್ರ ಸರ್ಕಾರ ಉಕ್ರೇನ್ ಗಡಿ ಭಾಗಕ್ಕೆ ವಿಮಾನ ಕಳುಹಿಸಿದ್ದು, ವಿಮಾನ ಪ್ರಯಾಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಇಂದು ರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆ ಆರಂಭವಾಗುವ ನಿರೀಕ್ಷೆ ಇದೆ.